ಎಸೆಸೆಲ್ಸಿ ಪರೀಕ್ಷೆ: ಕಾಳಗನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ
ಕಲಬುರಗಿ : ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯಾದ ಭಾವನಾ ಅವರು 625ಕ್ಕೆ 619 ಅಂಕಗಳನ್ನು (ಶೇ. 99.04) ಪಡೆದು ವಸತಿ ಶಾಲೆಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಬಕಾಷ್ ಹಾಗೂ ವಸತಿ ಶಾಲೆಯ ಪ್ರಾಂಶುಪಾಲರಾದ ಸುರೇಶ ಆಲ್ದಾರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉಳಿದ ವಿದ್ಯಾರ್ಥಿಗಳಾದ ರಾಮಕುಮಾರ 605 (ಶೇ. 96.08ಅಂ) ಅಂಕ, ರೋಹಿತ 600 (ಶೇ. 96) ಅಂಕ, ಪೃಥ್ವಿರಾಜ 587 (ಶೇ. 93.92 ) ಅಂಕ, ಲಕ್ಷ್ಮೀ 584 (ಶೇ. 93.44) ಅಂಕ, ವೆಂಕಟೇಶ 563 (ಶೇ. 90.08) ಅಂಕಗಳನ್ನು ಪಡೆದಿದ್ದಾರೆ.
2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಾಳಗನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇಕಡಾ 91.11 ರಷ್ಟು ಫಲಿತಾಂಶ ಬಂದಿದ್ದು, ಒಟ್ಟು 45 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ದರ್ಜೆ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ವಸತಿ ಶಾಲೆಯ ಪ್ರಾಚಾರ್ಯರು ತಿಳಿಸಿದ್ದಾರೆ.