×
Ad

ಕಾಲ್ತುಳಿತ ಪ್ರಕರಣ | 11 ಮಂದಿಯ ಸಾವಿಗೆ ಸರ್ಕಾರವೇ ನೇರ ಕಾರಣ: ಬಿಜೆಪಿ ಆರೋಪ

Update: 2025-06-06 21:45 IST

ಕಲಬುರಗಿ: ತರಾತುರಿಯಲ್ಲಿ ಆರ್‌ಸಿಬಿ ವಿಜಯೋತ್ಸವ ಆಯೋಜಿಸಿ 11 ಜನರ ಸಾವಿಗೆ ಕಾಂಗ್ರೆಸ್ ಸರಕಾರವೇ ಕಾರಣವಾಗಿದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ ಕಾಂಗ್ರೆಸ್ ಸರಕಾರದ ನಡೆ ಖಂಡಿಸಿ ಶುಕ್ರವಾರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಸೇರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸರಕಾರ ಸೂಕ್ತ ವ್ಯವಸ್ಥೆ ಮಾಡದೇ, ಅಮಾಯಕರ ಸಾವಿಗೆ ನೇರ ಕಾರಣವಾಗಿದೆ. ಇದರ ಹೊಣೆಯನ್ನು ಸರಕಾರ ಹೊರಬೇಕು ಎಂದು ಆಗ್ರಹಿಸಿದರು.

ಶಾಸಕ ಬಸವರಾಜ ಮತ್ತಿಮಡು ಮಾತನಾಡಿದರು.

ಬಿಜೆಪಿ ಒಬಿಸಿ ಮೋರ್ಚಾ ಮುಖಂಡ ಅವ್ವಣ್ಣ ಮ್ಯಾಕೇರಿ, ಮಹದೇವ್ ಬೆಳಮಗಿ, ಉಮೇಶ್ ಪಾಟೀಲ್, ಶಿವಯೋಗಿ ನಾಗನಹಳ್ಳಿ, ಶ್ರೀನಿವಾಸ್ ದೇಸಾಯಿ, ಅಪ್ಪು ಕಣಕಿ, ಗಿರಿರಾಜ್ ಯಳಮೇಲಿ ಸೇರಿದಂತೆ ಅನೇಕರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News