ಕಲಬುರಗಿಯ ಜಾನಪದ ಕಲಾವಿದ ವಿಶ್ವನಾಥ ತೋಟನಳ್ಳಿಗೆ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿ
ಕಲಬುರಗಿ: ಧಾರವಾಡದ ನಾಟ್ಯ ಸ್ಫೂರ್ತಿ ಆರ್ಟ್ ಆ್ಯಂಡ್ ಕಲ್ಚರಲ್ ಅಕಾಡೆಮಿಯ 16ನೇ ವಾರ್ಷಿಕೋತ್ಸವದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿಗೆ ಕಲಬುರಗಿಯ ಜಾನಪದ ಕಲಾವಿದ ವಿಶ್ವನಾಥ ತೋಟನಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಸಂಸ್ಥಾಪಕ, ನೃತ್ಯ ನಿರ್ದೇಶಕ ಹಾಗೂ ಅಧ್ಯಕ್ಷ ಸದಾನಂದ ಎಸ್. ಬಂಗೆಣ್ಣನವರು ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ತಿಂಗಳ 15ರಂದು ಧಾರವಾಡದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ. ಅಂದು ಕಾರ್ಯಕ್ರಮಕ್ಕೆ ಆಗಮಿಸಿ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿಯನ್ನು ಸ್ವೀಕರಿಸುವಂತೆ ವಿಶ್ವನಾಥ ತೋಟನಳ್ಳಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.