ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ಕಲಬುರಗಿ ಕೇಂದ್ರ ಕಾರಾಗೃಹದ ಇಬ್ಬರು ಜೈಲರ್‌ಗಳ ಅಮಾನತು
Update: 2024-10-19 12:52 IST
ಕಲಬುರಗಿ: ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಿರುವ ಬಗ್ಗೆ ವರದಿಯಾಗಿದೆ.
ಕರ್ತವ್ಯಲೋಪದಡಿ ಸೈನಾಜ್ ನಿಗೆವಾನ್, ಪಾಂಡುರಂಗ ಹರವಾಳ ಎಂಬವರನ್ನು ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜೈಲಿನಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಫೋಟೋ, ವಿಡಿಯೋ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದರು.
ಜೈಲಿನಲ್ಲಿ ಸ್ಮಾರ್ಟ್ ಫೋನ್ ಬಳಸಿದ ಕೈದಿಗಳು ಗಾಂಜಾ ಸೇದುತ್ತಾ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರುವುದು ಹಾಗೂ ಸೆಲ್ಫಿಗೆ ಪೋಸ್ ನೀಡಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ರಾಜ್ಯದಲ್ಲೆಡೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.