ಅಫಜಲಪುರ: ಸೆ. 5 ರಂದು ಶಿಕ್ಷಕರ ದಿನಾಚರಣೆ
ಸಾಂದರ್ಭಿಕ ಚಿತ್ರ (Photo credit: freepik.com)
ಕಲಬುರಗಿ: ಅಫಜಲಪುರ ಪಟ್ಟಣದ ಘತ್ತರಗಾ ರಸ್ತೆಯಲ್ಲಿರುವ ಉದಂತ್ ತರಬೇತಿ ಕೇಂದ್ರದ ವತಿಯಿಂದ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಿರ್ದೇಶಕರಾದ ಸವಿತಾ ಜಾಬಾದಿ ಮತ್ತು ಸಂಚಾಲಕರಾದ ಕೈಲಾಸ್ ಬಿದನೂರ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದ ಸಾನಿಧ್ಯವನ್ನು ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು ವಹಿಸಿಕೊಳ್ಳಲಿದ್ದು, ಉದ್ದಿಮೆದಾರ ಖಾಲಿದ್ ಜಾಹಾಗಿರದಾರ್ ಕಾರ್ಯಕ್ರಮ ಉದ್ಘಾಟಿಸುವರು. ಕ್ಷೇತ್ರ ಶಿಕ್ಷಣಾಧಿಕಾರಿ ಯುವರಾಜ್ ಗಾಡಿ ಅವರು ಅಧ್ಯಕ್ಷತೆ ವಹಿಸುವರು. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೋಮಲಿಂಗ ಒಡೆಯರ್ ಮತ್ತು ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಶಿಕ್ಷಕ ಸಂಗ್ರಾಮ ಗೌಡ ಪಾಟೀಲ್ ಅವರು ಪೂಜೆ ನರವೇರಿಸುವರು ಎಂದರು.
ಮುಖ್ಯ ಅತಿಥಿಗಳಾಗಿ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಸಂಜೀವ್ ಬಗಲಿ, ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಎಚ್ಎಸ್ ಪಾಟೀಲ್, ತಾಲೂಕ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿದ್ದಣ್ಣ ಚಿಂಚೋಳಿ, ಅನುದಾನಿತ ಪ್ರೌಢಶಾಲಾ ನೌಕರರ ಸಂಘದ ಅಧ್ಯಕ್ಷರಾದ ಎಸ್. ಎಮ್. ಕರಿಕಲ್ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಂತೋಷ ಹೆಗ್ಗಿ ಮತ್ತು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರಮೇಶ್ ಸಿಂಗೆ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಸಿಂಗೆ ಇವರು ಅತಿಥಿಗಳಾಗಿ ಉಪಸ್ಥಿತರಿರುವರು. ಉದಂತ್ ಕೋಚಿಂಗ್ ಕ್ಲಾಸ್ ನ ಕಾರ್ಯದರ್ಶಿಯಾದ ಪ್ರವೀಣ್ ಯಳಸಂಗಿ ಅವರು ಪ್ರಾಸ್ತಾವಿಕ ಮಾತನಾಡುವರು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.