×
Ad

ಶಾಸಕ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್​ ಆದೇಶಕ್ಕೆ ಹೈಕೋರ್ಟ್ ತಡೆ

Update: 2024-01-29 18:50 IST

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಒಡೆತನದ ಸಕ್ಕರೆ ಕಾರ್ಖಾನೆ ಬಂದ್ ಮಾಡುವಂತೆ ​ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್  ತಡೆ ನೀಡಿದೆ.

ಈ ಕುರಿತು ʼಎಕ್ಸ್‌ʼ ಮಾಹಿತಿ ಹಂಚಿಕೊಂಡಿರುವ ಯತ್ನಾಳ್‌, ಕಾಂಗ್ರೆಸ್ ಸರಕಾರ ನಮ್ಮ ಸಿದ್ದಸಿರಿ ಸಕ್ಕರೆ ಹಾಗು ಎಥನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗು ಮುಚ್ಚುವ ಷಡ್ಯಂತ್ರಕ್ಕೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ನೀಡಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇತ್ತೀಚೆಗೆ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಕಲಬುರಗಿ ಜಿಲ್ಲೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಾರ್ಖಾನೆ ಬಂದ್​ ಮಾಡುವಂತೆ ಆದೇಶಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News