×
Ad

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಭೀಕರ ಕೊಲೆ

Update: 2025-06-25 08:15 IST

ಸಾಂದರ್ಭಿಕ ಚಿತ್ರ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಪಟ್ನಾ ಗ್ರಾಮದ ಸಮೀಪದ ಡ್ರೈವರ್ ಧಾಬಾ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಸಿದ್ಧಾರೂಢ ಶರಣಬಸಯ್ಯ(35), ಜಗದೀಶ್ ದತ್ತಾತ್ರೇಯ (33), ರಾಮಚಂದ್ರ ಅಂಬಾರಾವ್ (35) ಕೊಲೆಯಾದವರು ಎಂದು ಗುರುತಿಸಲಾಗಿದೆ.

ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಧಾಬಾಗೆ ನುಗ್ಗಿದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News