×
Ad

ಟಿಪ್ಪರ್-ಬೈಕ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Update: 2024-06-12 20:06 IST

ಕಲಬುರಗಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಅಫಜಲಪೂರ ತಾಲೂಕಿನ ಬಡದಾಳ ಬಳಿ ನಡೆದಿದೆ.

ಸುರೇಶ್(45) ಹಾಗೂ ಅಲ್ಲಾವುದ್ದೀನ್ (55) ಸಾವನ್ನಪ್ಪಿದ ರೈತರು ಎಂದು ಗುರುತಿಸಲಾಗಿದೆ. ಇಬ್ಬರು ರೈತರು ಕೃಷಿ ಚಟುವಟಿಕೆಗೆ ಅವಶ್ಯಕವಾಗಿರುವ ರಸಗೊಬ್ಬರ, ಬೀಜ ತರಲು ಅಫಜಲಪುರ ಪಟ್ಟಣಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಗ್ರಾಮದ ಸಮೀಪ ಟಿಪ್ಪರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News