×
Ad

ಏರ್‌ ಇಂಡಿಯಾ ವಿಮಾನ ಪತನ| ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ನೀಡಬೇಕು: ಈಶ್ವರ ಖಂಡ್ರೆ ಆಗ್ರಹ

Update: 2025-06-13 18:38 IST

ಕಲಬುರಗಿ: ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತ ಸಂಬಂಧ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ನೀಡಬೇಕು ಎಂದು ಸಚಿವ ಈಶ್ಚರ ಖಂಡ್ರೆ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ವಿಮಾನ ದುರಂತ ಘಟನೆಗೆ ಕೇಂದ್ರ ಸರ್ಕಾರ ಹೊಣೆಹೊರಬೇಕು ಹಾಗೂ ಕೂಡಲೇ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ನೀಡಬೇಕು.‌ ಇದು  ಅತಿದೊಡ್ಡ ದುರಂತವಾಗಿದೆ, ಅತ್ಯಂತ ನೋವಿನ ಸಂಗತಿಯಾಗಿದೆ.

ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು, ಹೀಗಾಗಿ ಈ ದುರಂತದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆಯಾಗಿ ಆ ವರದಿ ಜನರ ಮುಂದೆ ಇಡಬೇಕು ಎಂದರು.

ಕಾಲ್ತುಳಿತ ಪ್ರಕರಣಕ್ಕೆ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿಗರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಕಾಲ್ತುಳಿತಕ್ಕೆ ರಾಜೀನಾಮೆ ಕೇಳುವವರು ಉತ್ತರ ಪ್ರದೇಶದಲ್ಲಿ ಕುಂಭಮೇಳದಲ್ಲಿ ಘಟನೆ ಕುರಿತಾಗಿಯೂ ರಾಜೀನಾಮೆ ಕೇಳಬೇಕು, ಸಾವಿನಲ್ಲಿ ರಾಜಕೀಯ‌ ಮಾಡಬಾರದು ಎಂದು ತಿರುಗೇಟು ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News