ಕಲಬುರಗಿ ರೈಲು ನಿಲ್ದಾಣದಲ್ಲಿ ಕಾಮಗಾರಿ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ
Update: 2025-06-01 21:23 IST
ಕಲಬುರಗಿ: ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ನಡೆಸಿದರು.
ಅಮೃತ ಭಾರತ ಯೋಜನೆಯಡಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಅಹವಾಲು ಆಲಿಸಿ ಮನವಿ ಪತ್ರ ಸ್ವೀಕರಿಸಿದರು.
ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವರನ್ನು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ್, ಶಶೀಲ ಜಿ. ನಮೋಶಿ, ಮಾಜಿ ಸಂಸದ ಡಾ.ಉಮೇಶ ಜಾಧವ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ , ಅಮರನಾಥ ಪಾಟೀಲ, ಸೋಲಾಪೂರ ರೈಲ್ವೆ ವಿಭಾಗದ ಡಿ.ಆರ್.ಎಂ. ಡಾ. ಸುಜಿತ್ ಮಿಶ್ರಾ ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.