ಕಲಬುರಗಿ: ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ಜಿಲ್ಲೆಯ ಆಳಂದ ಪಟ್ಟಣದ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ವಿಜಯಲಕ್ಷ್ಮಿ ಲಕ್ಷ್ಮೀಕಾಂತ ಪೋದಾರ್ ತೃತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಕಲಬುರಗಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದ ವಿಜಯಲಕ್ಷ್ಮಿ, ಇದೀಗ ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ತೃತೀಯ ಸ್ಥಾನ ಗಳಿಸುವ ಮೂಲಕ ಕಾಲೇಜು ಹಾಗೂ ಕಲಬುರಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಪಿಯುಸಿ ಮಟ್ಟದ ಈ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಈ ಸ್ಪರ್ಧೆಯಲ್ಲಿ ಕಲಬುರಗಿಯ ಕುಮಾರಿ ವಿಜಯಲಕ್ಷ್ಮಿ ತೃತೀಯ ಬಹುಮಾನ ಪಡೆದಿದ್ದಾರೆ.

ಕುಮಾರಿ ವಿಜಯಲಕ್ಷ್ಮಿ ಅವರಿಗೆ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ 11,000 ರೂ. ನಗದು ಬಹುಮಾನ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು ಎಂದು ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor