×
Ad

ಸೆ.30ರಂದು ದಸರಾ ಕಾವ್ಯ ಸಂಭ್ರಮದ ಮಹಿಳಾ ಕವಿಗೋಷ್ಠಿ: ತೇಗಲತಿಪ್ಪಿ

Update: 2025-09-29 22:19 IST

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಸರಾ ಕಾವ್ಯ ಸಂಭ್ರಮದ ಮಹಿಳಾ ಕವಿಗೋಷ್ಠಿಯನ್ನು ಸೆ.30 ರ ಮಧ್ಯಾಹ್ನ 12.15 ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಕವಿಗೋಷ್ಠಿಯಲ್ಲಿ ಭಾಗವಹಿಸಲಿರುವ ಸುಮಾರು ಹದಿನಾರು ಕವಯತ್ರಿಯರು ತಮ್ಮೆದೆಯೊಳಗಿನ ಭಾವನೆಗಳಿಗೆ ಅಕ್ಷರ ರೂಪ ಕೊಟ್ಟು, ಪ್ರಚಲಿತ ವಿದ್ಯಮಾನಗಳ ಕುರಿತು ಅನೇಕ ಸಂಗತಿಗಳು ನಮ್ಮೆದುರು ತೆರೆದಿಡಲಿದ್ದಾರೆ.

ಜಿಪಂ ನ ಮಾಜಿ ಉಪಾಧ್ಯಕ್ಷೆ ಶೋಭಾ ಸಿದ್ಧು ಸಿರಸಗಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಡಾ. ಶ್ರೀಶೈಲ ನಾಗರಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಜೆಸ್ಕಾಂ ನ ನೂತನ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಎಂ.ಎಸ್.ಐ. ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಮೈತ್ರಾದೇವಿ ಹಳೇಮನಿ, ಅಖಿಲ ಕರ್ನಾಟಕ ದಲಿತ ಸೇನೆಯ ರಾಜ್ಯಾಧ್ಯಕ್ಷ ದತ್ತಾತ್ರೇಯ ಕುಡಕಿ, ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News