×
Ad

ಕಲಬುರಗಿ: ಸೆಪ್ಟೆಂಬರ್ 30 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

Update: 2025-09-29 22:08 IST

ಕಲಬುರಗಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ಘಟಕ ಇವುಗಳ ಸಹಯೋಗದೊಂದಿಗೆ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025”ರ ಅಂಗವಾಗಿ ಕಲಬುರಗಿ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರ ಪ್ರದರ್ಶನ, ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿಯುಳ್ಳ ಕ್ಯೂ.ಆರ್. ಕೋಡ್ ಬಿಡುಗಡೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿನ ಸುವರ್ಣ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ, ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ ಅವರು ಗೌರವ ಉಪಸ್ಥಿತಿ ವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಡಾ. ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಡಾ. ತಳವಾರ ಸಾಬಣ್ಣ, ಸುನೀಲ್ ವಲ್ಲ್ಯಾಪುರೆ, ತಿಮ್ಮಣ್ಣಪ್ಪ ಕಮಕನೂರ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ್ ಜಾನೆ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ “ಪ್ರವಾಸೋದ್ಯಮ ಹಾಗೂ ಸುಸ್ಥಿರ ಪರಿವರ್ತನೆ” ಸಂದೇಶದಡಿ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಡಾ. ಎಸ್. ತಿಪ್ಪೇಸ್ವಾಮಿ ಅವರು ಉಪನ್ಯಾಸ ನೀಡುವರು. ವಿಜನ್ ಪ್ಲೈ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ. ಪ್ರವಾಸೋದ್ಯಮ ಹಾಗೂ ಸುಸ್ಥಿರ ಪರಿವರ್ತನೆ ಎಂಬ ಸಂದೇಶದೊಂದಿಗೆ ವಿಶ್ವ ಪರಿಸರ ದಿನಾಚರಣೆ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News