×
Ad

ಯಡ್ರಾಮಿ | ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಡಾ.ಅಜಯ್‌ ಸಿಂಗ್

Update: 2025-07-15 19:05 IST

ಕಲಬುರಗಿ: ಯಡ್ರಾಮಿ ಪಟ್ಟಣದ ಬಸ್ ನಿಲ್ದಾಣ ಹಾಗೂ ಡಾ.ಅಂಬೇಡ್ಕ‌ರ್ ವೃತ್ತದ ಸಮೀಪದಲ್ಲಿರುವ ಇಂದಿರಾ ಕ್ಯಾಂಟಿನ್ ಅನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯ್‌  ಸಿಂಗ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಬಡವರಿಗೆ, ಕೂಲಿಕಾರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ ಮಾಡಲಾಗಿದೆ. ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಎಚ್ಚರಿಕೆ ವಹಿಸಲಾಗಿದೆ ಎಂದರು.

ಇಂದಿರಾ ಕ್ಯಾಂಟೀನ್ ಗಳನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದೆ. ನಮ್ಮದು ಬಡವರ ಪರ ಇರುವ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಇಂದಿರಾ ಕ್ಯಾಂಟೀನ್ ಸ್ಥಗಿತಗೊಳಿಸಲಾಗಿತ್ತು. ಈಗ ಸಾಮಾನ್ಯ ಜನರಿಗೆ ಅನುಕೂಲವಾಗುವ ಪ್ರದೇಶದಲ್ಲಿ ಆದ್ಯತೆ ನೀಡುತ್ತಿರುವ ಈ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾ‌ರ್ ಯಲ್ಲಪ್ಪ ಸುಬೇದಾರ್, ಪ.ಪಂ ಮುಖ್ಯಾಧಿಕಾರಿ ಶ್ಯಾಮ್ ಭಜಂತ್ರಿ, ಶಾಂತಪ್ಪ ಕೂಡಲಗಿ, ಶೌಕತ್ ಅಲಿ ಆಲೂರು ಸೇರಿದಂತೆ ತಾಲ್ಲೂಕು ಅಧಿಕಾರಿಗಳು, ಮತ್ತಿತರ ಮುಖಂಡರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News