ಯಡ್ರಾಮಿ| ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೈದಪ್ಪ ಹೊಸಮನಿ ನೇಮಕ
Update: 2025-12-16 19:06 IST
ಕಲಬುರಗಿ (ಯಡ್ರಾಮಿ) : ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳಿಗೆ ಸದುಪಯೋಗ ತಲುಪಿಸುವ ಉದ್ದೇಶದಿಂದ ಯಡ್ರಾಮಿ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈದಪ್ಪ ಹೊಸಮನಿ ಅವರನ್ನು ನೇಮಕ ಮಾಡಲಾಗಿದೆ.
ಇದಲ್ಲದೆ ತಾಲೂಕು ಪಂಚಾಯಿತಿ ಯಡ್ರಾಮಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಲ್ಲಿ ಈ ಸಮಿತಿ ಪ್ರಮುಖ ಪಾತ್ರ ವಹಿಸಲಿದೆ.