×
Ad

Yedrami | ಜು.10 ರಂದು ಅಂಬೇಡ್ಕರ್ ಜಯಂತಿ : ಭವ್ಯ ಮೆರವಣಿಗೆ, ಆರೋಗ್ಯ ಶಿಬಿರ

Update: 2026-07-08 21:34 IST

ಯಡ್ರಾಮಿ: ಪಟ್ಟಣದಲ್ಲಿ ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವದ ಅಂಗವಾಗಿ “ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ರಕ್ಷಿಸಿ” ಎಂಬ ಘೋಷಣೆಯೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಯಂತೋತ್ಸವ ಸಮಿತಿ ಖಜಾಂಚಿ ಮಹೇಂದ್ರ ಬಾಲೂರ್ ತಿಳಿಸಿದ್ದಾರೆ.

ಜಯಂತೋತ್ಸವದ ಅಂಗವಾಗಿ ಬೆಳಗ್ಗೆ 11 ಗಂಟೆಗೆ ಸರದಾರ್ ಶರಣಗೌಡರ ವೃತ್ತದಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಸಂಜೆ 5 ಗಂಟೆಗೆ “ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ರಕ್ಷಿಸಿ” ಎಂಬ ಘೋಷಣೆಯೊಂದಿಗೆ ಬಹಿರಂಗ ಸಭೆ ನಡೆಯಲಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು, ಉಪನ್ಯಾಸಕರು, ಹೋರಾಟಗಾರರು ಹಾಗೂ ಗಣ್ಯರು ಭಾಗವಹಿಸಲಿದ್ದು, ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News