×
Ad

Yedrami | ಅಕ್ರಮ ಪಡಿತರ ಅಕ್ಕಿ ಮಾರಾಟ : 7 ಕ್ವಿಂಟಲ್ ಅಕ್ಕಿ ವಶ

Update: 2026-07-04 11:19 IST

ಯಡ್ರಾಮಿ: ತಾಲೂಕಿನ ಚಿಕ್ಕ ಹಂಗರಗಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಾಲೂಕು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 7 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಿ ಮಾರಾಟಕ್ಕೆ ಇಡಲಾಗಿದ್ದ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಪ್ಪ ಹಣಮಂತ್ರಾಯ ಹಾಗೂ ಮಾಳಪ್ಪ ಹಣಮಂತ್ರಾಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಲೂಕು ಆಹಾರ ನಿರೀಕ್ಷಕ ಅಧಿಕಾರಿ ಸುರೇಖಾ ನಡಗೇರಿ ಮಾತನಾಡಿ, ಅಕ್ರಮ ಸಂಗ್ರಹ ಮತ್ತು ಮಾರಾಟದ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿದ್ದು, ಸ್ಥಳದಿಂದ 7 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುವವರ ವಿರುದ್ಧ ಮುಂದೆಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News