×
Ad

Yedrami | ಬಳಬಟ್ಟಿ ಗ್ರಾಮಕ್ಕೆ ತಹಶೀಲ್ದಾರ್ ಭೇಟಿ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲನೆ

Update: 2026-07-11 19:30 IST

ಯಡ್ರಾಮಿ : ತಾಲೂಕಿನ ಬಳಬಟ್ಟಿ ಗ್ರಾಮಕ್ಕೆ ತಹಶೀಲ್ದಾರ್ ಅವರು ಭೇಟಿ ನೀಡಿ, ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನ (SIR) ಅಡಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ತಹಶೀಲ್ದಾರ್ ಅವರು, ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕಾರ್ಯವನ್ನು ನಿಯಮಾನುಸಾರ, ಪಾರದರ್ಶಕವಾಗಿ ಮತ್ತು ಯಾವುದೇ ಲೋಪಗಳಿಲ್ಲದಂತೆ ಕೈಗೊಳ್ಳುವಂತೆ ಸೂಚಿಸಿದರು.

ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳ ಕಾರ್ಯವನ್ನು ನಿಗದಿತ ಮಾರ್ಗಸೂಚಿಗಳಂತೆ ಸಮರ್ಪಕವಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಶೀಲನೆ ವೇಳೆ ಜೇವರ್ಗಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜಶೇಖರ, ಗ್ರಾಮ ಆಡಳಿತ ಅಧಿಕಾರಿ ನಿಂಗಣ್ಣ, ಶಮಸುರ, ಬಳಬಟ್ಟಿ ಬಿಎಲ್ಓ ಹನುಮಂತ ಹಡಪದ, ರಫೀಕ್, ಸಿರೆಸದಾರ ಮಹಾಲಿಂಗ ಹಾಗೂ ಸಿಬ್ಬಂದಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News