Yedrami | ಮನೆ ತಿಜೋರಿ ಮುರಿದು 4 ತೊಲ ಬಂಗಾರ, 10 ತೊಲ ಬೆಳ್ಳಿ ಕಳವು

Update: 2026-08-04 18:51 IST

ಸಾಂದರ್ಭಿಕ ಚಿತ್ರ

ಯಡ್ರಾಮಿ : ತಾಲೂಕಿನ ಪಡಗದಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿದ ಕಳ್ಳರು ತಿಜೋರಿ ಮುರಿದು ಸುಮಾರು 4 ತೊಲ ಬಂಗಾರದ ಆಭರಣಗಳು ಹಾಗೂ 10 ತೊಲ ಬೆಳ್ಳಿ ವಸ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದೆ.

ಗ್ರಾಮದ ಈರಣ್ಣ ಮಲ್ಲಾಬಾದ ಅವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆ. ಈರಣ್ಣ ಅವರು ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳುವ ವೇಳೆ ಮನೆಗೆ ಬೀಗ ಹಾಕಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ತಿಜೋರಿಯ ಕೀಲಿಯನ್ನು ಮುರಿದು ಅದರಲ್ಲಿದ್ದ ಸುಮಾರು 4 ತೊಲ (ಸುಮಾರು 20 ಗ್ರಾಂ) ಬಂಗಾರದ ಆಭರಣಗಳು ಹಾಗೂ 10 ತೊಲ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದಾರೆ.

ಕೃಷಿ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಯಡ್ರಾಮಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News