×
Ad

Kalaburagi | ಜೂ.19ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಜಾಥಾ ಕಾರ್ಯಕ್ರಮ

Update: 2026-06-17 18:00 IST

Photo credit : PTI

ಕಲಬುರಗಿ : 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.19 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಿಂದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಯೋಗ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಆಯುಷ್ ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿ ಜಿಲ್ಲೆಯ ಎಲ್ಲಾ ವಿವಿಧ ಇಲಾಖೆಗಳು ಹಾಗೂ ವಿವಿಧ ಯೋಗ ಸಂಘ ಸಂಸ್ಥೆಗಳು ಮತ್ತು ವಿವಿಧ ಆಯುಷ್ ವಿದ್ಯಾಲಯಗಳೊಂದಿಗೆ ಜೂ.21 ರಂದು ಬೆಳಿಗ್ಗೆ 6.30 ಗಂಟೆಗೆ ಕಲಬುರಗಿ ನಗರದ ಚಂದ್ರಶೇಖರ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News