×
Ad

162 ಡ್ರಗ್ಸ್ ವ್ಯಸನಿಗಳಿಗೆ ಕೌನ್ಸೆಲಿಂಗ್: ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್

Update: 2023-07-16 22:49 IST

ಕುಲದೀಪ್ ಕುಮಾರ್ ಜೈನ್

ಮಂಗಳೂರು, ಜು.16: ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ರವಿವಾರ 162 ಮಂದಿ ಡ್ರಗ್ಸ್ ವ್ಯಸನಿಗಳಿಗೆ ಕೌನ್ಸೆಲಿಂಗ್‌ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ‌.

ಮಾನಸಿಕ ಆರೋಗ್ಯ ತಜ್ಞರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೌನ್ಸೆಲಿಂಗ್ ನಡೆಸಿ ಮಾಹಿತಿ ಪಡೆದುಕೊಳ್ಳಲಾಯಿತು. ವ್ಯಸನದಿಂದ ಹೊರಬರಲು ಬೇಕಾದ ನೆರವು ಒದಗಿಸುವ ಭರವಸೆ ನೀಡಲಾಯಿತು.

ಡ್ರಗ್ಸ್ ವಿರುದ್ದ ಕಾರ್ಯಾಚರಣೆ, ಜಾಗೃತಿ ಅಭಿಯಾನದ ಜತೆಗೆ ವ್ಯಸನಿಗಳ ಕೌನ್ಸೆಲಿಂಗ್ ನಡೆಸುವ ಪ್ರಕ್ರಿಯೆಯನ್ನು ಮಂಗಳೂರು ಪೊಲೀಸರು ಕಳೆದ ಮೂರು ವಾರಗಳಿಂದ ನಡೆಸಲಾಗುತ್ತಿದೆ. ಕಳೆದ ವಾರ ಕೌನ್ಸೆಲಿಂಗ್‌ನಲ್ಲಿ 144 ಮಂದಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News