×
Ad

ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್‌ಗೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

Update: 2023-07-03 21:50 IST

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ಮಂಗಳೂರು, ಜು.3: ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿ ಹವಾಮಾನದ ಸ್ಥಿತಿಗತಿ ಅರಿತುಕೊಂಡು ರಜೆ ಘೋಷಿಸುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯ ಜೊತೆ ಚರ್ಚೆ ನಡೆಸಬೇಕು ಎಂದು ಡಿಸಿ ನಿರ್ದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News