×
Ad

ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಮೃತ್ಯು

Update: 2023-07-16 19:20 IST

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ಮನೆಯಲ್ಲಿ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಮೃತಪಟ್ಟ ಘಟನೆ ದಿಡುಪೆಯಲ್ಲಿ ಸಂಭವಿಸಿದೆ.

ಮೃತ ಬಾಲಕ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ ಶ್ರೀಶ (14) ಎಂದು ಗುರುತಿಸಲಾಗಿದೆ.

ಇಂದು ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ತರಲಾಗಿದೆ.

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News