×
Ad

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆ

Update: 2023-07-01 20:54 IST

ಉಡುಪಿ, ಜು.1: ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ವಿಧಾನಸಭಾ ಚುನಾವಣೆಯ ಗೆಲುವಿನಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಮತವು ನಿರ್ಣಾಯಕ ಪಾತ್ರ ವಹಿಸಿದೆ. ಮುಂಬರಲಿರುವ ಜಿಪಂ, ತಾಪಂ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲರೂ ಸಂಘಟಿತ ಶ್ರಮ ವಹಿಸಬೇಕು ಎಂದು ತಿಳಿಸಿದರು.

ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಮಾತನಾಡಿ, ಭಾರತ ಆರ್ಥಿಕತೆಯ ಪ್ರಗತಿಯ ವೇಗದಲ್ಲಿ ವಿಶ್ವದಲ್ಲೇ ಮೂಂಚೂಣಿ ಸ್ಥಾನವನ್ನು ಪಡೆದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಭರ್ಜರಿ ಬಹುಮತದಿಂದ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಎಲ್ಲರೂ ಕಂಕಣಬದ್ಧರಾಗಿ ಶ್ರಮಿಸಬೇಕಾಗಿದೆ ಎಂದರು.

ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಪ್ರಮುಖರು, ಒಬಿಸಿ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಒಬಿಸಿ ಮೋರ್ಚಾ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿ, ಅರುಣ್ ಕುಮಾರ್ ಬಾಣ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News