×
Ad

ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿ ವಿರೋಧವಿಲ್ಲ: ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ

Update: 2023-06-30 19:41 IST

ಸಾಂದರ್ಭಿಕ ಚಿತ್ರ

ಮಂಗಳೂರು, ಜೂ.30: ರಾಜ್ಯದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿಯ ವಿರೋಧವಿಲ್ಲ. ಆದರೆ ಅದನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡಲು ಕಾಂಗ್ರೆಸ್‌ ಸರಕಾರ ಒದ್ದಾಡುತ್ತಿದೆ. ಜನರ ದಿಕ್ಕು ತಪ್ಪಿಸಲು ಬಿಜೆಪಿಯು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್‌ ಅಪಪ್ರಚಾರ ಮಾಡುತ್ತಿದೆ. ಇದು ಖಂಡನೀಯ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರಕಾರದ ಯೋಜನೆಗಳನ್ನು ಬಿಜೆಪಿ ತಿರಸ್ಕರಿಸುವುದಿಲ್ಲ. ಸರಿಯಾಗಿ ಅನುಷ್ಠಾನ ಮಾಡಿ ಎಂದು ಆಗ್ರಹಿಸುತ್ತದೆ. ಧಮ್ ಇದ್ದರೆ ಗ್ಯಾರಂಟಿ ಯೋಜನೆಯು ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಕಾಂಗ್ರೆಸ್ಸಿಗರು ಘೋಷಣೆ ಮಾಡಲಿ ಎಂದು ಸುದರ್ಶನ ಮೂಡುಬಿದಿರೆ ಸವಾಲು ಹಾಕಿದ್ದಾರೆ.

ಯಾವುದೇ ಷರತ್ತು ಹಾಕದೆ ಗ್ಯಾರಂಟಿ ಘೋಷಣೆ ಮಾಡಿದ ಕಾಂಗ್ರೆಸ್ ಇದೀಗ ಹಲವು ಷರತ್ತುಗಳನ್ನು ವಿಧಿಸಿ ರಾಜ್ಯದ ಜನತೆಗೆ ವಂಚಿಸುತ್ತಿದೆ ಎಂದು ಆಪಾದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News