×
Ad

ರೆಸ್ಕ್ಯೂ ಚಾರಿಟೇಬಲ್ ಟ್ರಸ್‌ನಿಂದ ರಕ್ತದಾನ ಶಿಬಿರ

Update: 2023-07-09 21:14 IST

ಮಂಗಳೂರು, ಜು.9: ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಫರಂಗಿಪೇಟೆ ಇದರ 11ನೇ ವಾರ್ಷಿಕೋತ್ಸವದ ಅಂಗವಾಗಿ ಅರ್ಕುಳದ ಖಾಸಗಿ ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಸಮಾಜ ಸೇವೆಯನ್ನು ಮಾಡುತ್ತಿದೆ. ಉತ್ತಮ ಸಮಾಜ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಈ ಸಂದರ್ಭ ವಿದ್ಯಾರ್ಥಿವೇತನ ಮತ್ತು ಅರ್ಹ ಕುಟುಂಬಗಳಿಗೆ ಆರೋಗ್ಯ ಕಾರ್ಡ್ ವಿತರಿಸಲಾಯಿತು. ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮಾರಿಪಳ್ಳ, ಮಾಜಿ ಸಚಿವ ರಮನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ಪ್ರಕಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News