×
Ad

ಕಸಾಪದಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಗೆ ಅಭಿನಂದನೆ

Update: 2023-07-09 18:34 IST

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಭಿನಂದಿಸಲಾಯಿತು.

ಕನ್ನಡ ಭವನ ಹಾಗೂ ಕಸಾಪ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದಾಗ ಸಚಿವರು, ಸಕಾರಾತ್ಮಕವಾಗಿ ಸ್ಪಂದಿಸಿ, ಸಂತಸ ವ್ಯಕ್ತಪಡಿಸಿ ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ, ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಎಚ್.ಪಿ., ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ದಿನಕರ ಶೆಟ್ಟಿ, ಗಣನಾಥ ಎಕ್ಕಾರು, ನರಸಿಂಹ ಮೂರ್ತಿ ಹಾಗೂ ಶೋಭಾ ಕಲ್ಕೂರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News