×
Ad

ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆ ಕಾಂಕ್ರಿಟೀಕರಣಕ್ಕೆ ಸಿಪಿಎಂ ಒತ್ತಾಯ

Update: 2023-06-25 22:06 IST

ಮಂಗಳೂರು: ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯ ಮುಖ್ಯ ರಸ್ತೆಯಿಂದ ಹಿಡಿದು ಒಳ ರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಆದ್ದರಿಂದ ಪಾಲಿಕೆ ಆಡಳಿತವು ಕೂಡಲೇ ಸಂಪೂರ್ಣ ವಾಗಿ ಹದಗೆಟ್ಟ ಜಲ್ಲಿಗುಡ್ಡೆ ಜಯನಗರದ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಬೇಕೆಂದು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿ ಹಾಗೂ ಬಜಾಲ್ ಜಲ್ಲಿಗುಡ್ಡೆ ಸಮಿತಿ ಒತ್ತಾಯಿಸಿದೆ.

ಈ ಬಗ್ಗೆ ನಾಗರಿಕರು ಹಲವು ಬಾರಿ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಹಾಗಾಗಿ ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿಯ ಕಾರ್ಯದರ್ಶಿ ಸಂತೋಷ್ ಬಜಾಲ್, ಜಲ್ಲಿಗುಡ್ಡೆ ಸಮಿತಿಯ ಕಾರ್ಯದರ್ಶಿ ರೋಹಿಣಿ ಜಲ್ಲಿಗುಡ್ಡೆ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News