×
Ad

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Update: 2023-06-25 20:15 IST

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಸ್ನೇಹಿತರೊಂದಿಗೆ ಭೇಟಿ ನೀಡಿದರು.

ದೇವಳಕ್ಕೆ ಆಗಮಿಸಿದ ಅವರು ದರುಶನ ಪಡೆದು ಸೇವೆ ನೆರವೇರಿಸಿ ಪ್ರಸಾದ ಸ್ವೀಕರಿಸಿದರು.ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.

ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ಬಳಿಕ ಆಡಳಿತ ಕಚೇರಿಗೆ ಭೇಟಿ ನೀಡಿದ ರಾಹುಲ್ ಅವರಿಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭ ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್ ಮತ್ತು ರಾಹುಲ್ ಅವರ ಸ್ನೇಹಿತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News