×
Ad

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರ ಸ್ವೀಕಾರ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.

Update: 2023-06-17 12:21 IST

ಮಂಗಳೂರು, ಜೂ.17: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.

ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್ ಬ್ಯಾಚ್ನವರಾಗಿದ್ದು, ದಿಂಡಿಗಲ್ ಅಣ್ಣಾ ವಿವಿಯ ಪಿಎಸ್ಎನ್ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ಸಯನ್ಸ್ನಲ್ಲಿ ಪದವಿ ಪಡೆದಿದ್ದಾರೆ.

ಪ್ರಸಕ್ತ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮುಗಿಲನ್, ಅದಕ್ಕೂ ಮುನ್ನ ಬಾಗಲಕೋಟೆ ಜಮಖಂಡಿ ಉಪವಿಭಾಗ ಅಧಿಕಾರಿ, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಉತ್ತರ ಕನ್ನಡ ಜಿಲ್ಲೆಯ ಉಪ ವಿಭಾಗ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News