×
Ad

ಜು.7ರಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2023-07-06 19:59 IST

ಸಚಿವ ದಿನೇಶ್ ಗುಂಡೂರಾವ್

ಮಂಗಳೂರು,ಜು.6: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜು.7ರಿಂದ ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜು.7ರ ರಾತ್ರಿ 9:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಧರ್ಮಸ್ಥಳಕ್ಕೆ ತೆರಳಿ ಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವರು.

ಜು.8ರ ಬೆಳಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ, 10ಕ್ಕೆ ಕನ್ಯಾಡಿ ರಾಮಮಂದಿರಕ್ಕೆ ಭೇಟಿ ನೀಡುವರು. ಪೂ.11ಕ್ಕೆ ಉಜಿರೆಯ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾ ವಿದ್ಯಾಲಯದ 29ನೇ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2ಕ್ಕೆ ಬೆಳ್ತಂಗಡಿಯ ಪ್ರಸನ್ನ ಎಜುಕೇಶನ್ ಟ್ರಸ್ಟ್‌ಗೆ ಭೇಟಿ ನೀಡುವರು. 2.15ಕ್ಕೆ ಬೆಳ್ತಂಗಡಿ ತಾಲೂಕು ಮಟ್ಟದ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ 3:30ಕ್ಕೆ ಬೆಳ್ತಂಗಡಿಯ ಸಂಗಮ್ ಹಾಲ್‌ನಲ್ಲಿ ಜನತಾ ದರ್ಶನದಲ್ಲಿ ಭಾಗಿಯಾಗುವರು. ರಾತ್ರಿ 9:50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 10:45ಕ್ಕೆ ಬೆಂಗಳೂರು ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News