×
Ad

ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಬದಿಯ ಗುಡ್ಡ ಕುಸಿತ

Update: 2023-07-04 19:20 IST

ಉಡುಪಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಮಣಿಪಾಲ ಕೆಎಫ್‌ಸಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ನಿರಂತರ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಜರಿದಿದ್ದು, ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿವೆ. ಅಲ್ಲದೆ ಗುಡ್ಡದ ಮೇಲೆ ಕಟ್ಟಡಗಳಿರುವುದರಿಂದ ಆತಂಕ ಸೃಷ್ಟಿಯಾಗಿದೆ. ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ವಾಹನ ಸವಾರರಿಗೂ ಭೀತಿ ಉಂಟಾಗಿದೆ.

೨೦೧೯ರ ಆಗಸ್ಟ್ ತಿಂಗಳಲ್ಲಿ ಇದೇ ರೀತಿ ಇಲ್ಲಿಯ ಗುಡ್ಡದ ಮಣ್ಣು ಜರಿದು ಹೆದ್ದಾರಿಗೆ ಬಿದ್ದಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News