×
Ad

ಹೆಬ್ರಿಯಲ್ಲಿ ಭರತನಾಟ್ಯ ತರಬೇತಿ ಉದ್ಘಾಟನೆ

Update: 2023-07-03 18:46 IST

ಹೆಬ್ರಿ, ಜು.೩: ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿ ಯಲ್ ಕಾಲೇಜಿನಲ್ಲಿ ಆರಂಭಗೊಂಡ ಭರತನಾಟ್ಯ ತರಗತಿಯನ್ನು ಹೆಬ್ರಿ ಜೇಸಿಐ ಅಧ್ಯಕ್ಷ ಪ್ರವೀಣ್ ಶೆಟ್ಟಿ ರವಿವಾರ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು. ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯಡಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕ ವಿಜಯ, ಜೇಸಿರೆಟ್ ಪೂರ್ವಾಧ್ಯಕ್ಷೆ ಗೀತಾ ಮಂಜು ನಾಥ, ಭರತನಾಟ್ಯ ಗುರು ಧನ್ಯ ವೇಣೂರು, ಶಾಸ್ತ್ರೀಯ ಸಂಗೀತ ಗುರು ಸ್ವಾತಿ ಭಟ್, ಜೇಸಿಐ ಪೂರ್ವಾಧ್ಯಕ್ಷ ಮಂಜುನಾಥ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಉದಯ ಶೆಟ್ಟಿ ಸ್ವಾಗತಿಸಿದರು. ಮುದ್ರಾಡಿ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News