×
Ad

ಕಡಬ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Update: 2023-06-24 14:19 IST

ಕಡಬ, ಜೂ.24. ವ್ಯಕ್ತಿಯೊಬ್ಬರು ಕುಮಾರಾಧಾರ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರದಂದು ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ.

ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸಿದ ವೇಳೆ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News