×
Ad

ಕೆಂಚನಕೆರೆ: ರಾಜ್ಯ ಹೆದ್ದಾರಿಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

Update: 2023-07-07 22:59 IST

ಮುಲ್ಕಿ: ಕಿನ್ನಿಗೋಳಿ-ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಬಾರಿ ಗಾತ್ರದ ಮರ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಮರವು ಟ್ರಾನ್ಸ್ಫಾರ್ಮರ್ ಮೇಲೆ ಬಿದ್ದು ಬಳಿಕ ರಸ್ತೆಗೆ ಬಿದ್ದಿದೆ.

ಈ ಸಂದರ್ಭ ಸ್ಥಳದಲ್ಲಿ ಭೀಕರ ಶಬ್ದ ಉಂಟಾಗಿದ್ದು, ವಿದ್ಯುತ್ ಸಂಚಾರ ನಿಲುಗಡೆಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ.

ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ ಹಾಗೂ ತಂತಿಗಳಿಗೆ ಹಾನಿಯಾಗಿದ್ದು ಕಿನ್ನಿಗೋಳಿ, ಮುಲ್ಕಿ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಈ ಸಂದರ್ಭ ಹೆದ್ದಾರಿ ಸಂಚಾರ ತಡೆಯುಂಟಾಗಿತ್ತು. ಸ್ಥಳಕ್ಕೆ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ, ಕಂದಾಯ ಅಧಿಕಾರಿ ದಿನೇಶ್, ಅರಣ್ಯ ಇಲಾಖೆ ಅಧಿಕಾರಿಗಳು, ಮೆಸ್ಕಾಂ ಸಿಬ್ಬಂದಿ ದಾವಿಸಿದ್ದು ತೆರವು ಕಾರ್ಯ ನಡೆಯುತ್ತಿದೆ.

ಮುಲ್ಕಿ ವೆಂಕಟರಮಣ ದೇವಸ್ಥಾನದ ಬಳಿ ಕೂಡ ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದ್ದು ತೆರವು ಕಾರ್ಯಾಚರಣೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News