×
Ad

ಮೋದಿ ಆಡಳಿತದ 9 ವರ್ಷಗಳ ಸಾಧನೆ ಪ್ರಚಲಿತಗೊಳಿಸಲು ’ಮಹಾ ಸಂಪರ್ಕ ಅಭಿಯಾನ’

Update: 2023-07-16 20:08 IST

ಉಡುಪಿ, ಜು.16: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಸಲುವಾಗಿ ಪಕ್ಷ ಹಮ್ಮಿಕೊಂಡಿರುವ ಸರಣಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್ ಅಧ್ಯಕ್ಷತೆಯಲ್ಲಿ ಮಂಡಲ ಕಛೇರಿಯಲ್ಲಿ ಶನಿವಾರ ನಡೆಯಿತು.

ಅಭಿಯಾನದ ಸರಣಿ ಕಾರ್ಯಕ್ರಮಗಳ ಗ್ರಾಮಾಂತರ ಮಂಡಲ ಉಸ್ತುವಾರಿ ರೇಶ್ಮಾ ಉದಯ ಶೆಟ್ಟಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ವಿವರಗಳನ್ನೊಳಗೊಂಡಿರುವ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರ ಶಿವ ಕುಮಾರ್ ಅಂಬಲಪಾಡಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಕಾರ್ಯದರ್ಶಿ ಸುರೇಶ್ ಪೂಜಾರಿ, ಬ್ರಹ್ಮಾವರ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ದೇವಾನಂದ್, ಪ್ರಮುಖರಾದ ರಾಜೇಶ್ ಶೆಟ್ಟಿ ಬಿರ್ತಿ, ರಾಜು ಪೂಜಾರಿ ಉಪ್ಪೂರು ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News