×
Ad

ಮಂಗಳೂರು: ಬಾಲಕಿಯ ಅಪಹರಿಸಿ, ಅತ್ಯಾಚಾರ ಪ್ರಕರಣ; ಆರೋಪಿ ಸೆರೆ

Update: 2023-06-27 19:10 IST

ಮಂಗಳೂರು, ಜೂ.27: ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಲ್ಲಿಗುಡ್ಡೆಯ ಲಿಖಿತ್ (19) ಎಂಬಾತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆಯ ಕುಟುಂಬವು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದೆ.

ಪ್ರೌಢಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಇನ್‌ಸ್ಟಾಗ್ರಾಂ ಮೂಲಕ ಯುವಕನ ಪರಿಚಯವಾಗಿದ್ದು, ಇಬ್ಬರೂ ಆತ್ಮೀಯರಾಗಿದ್ದರು. ಈ ಮಧ್ಯೆ ಆರೋಪಿ ಯುವಕನು ಬಾಲಕಿಯನ್ನು ಅಪಹರಿಸಿದ್ದು, ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಲಿಖಿತ್ ತನ್ನ ಗೆಳೆಯನ ಬಾಡಿಗೆ ಮನೆಯೊಂದಕ್ಕೆ ಬಾಲಕಿಯನ್ನು ಕರೆದೊಯ್ದು ಕೂಡಿ ಹಾಕಿರುವುದನ್ನು ಪತ್ತೆಹಚ್ಚಿದ್ದರು. ಆರೋಪಿಯ ವಿರುದ್ಧ ಅಪಹರಣ, ದೌರ್ಜನ್ಯ, ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ಉರ್ವ ಇನ್‌ಸ್ಪೆಕ್ಟರ್ ಭಾರತಿ ಜಿ. ಸಿಬ್ಬಂದಿಗಳಾದ ಹರೀಶ್, ಅನೀತಾ ಮತ್ತವರ ತಂಡ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News