×
Ad

ಮಂಗಳೂರು | ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ: ಆರೋಪಿ ಬಂಧನ

Update: 2023-06-29 19:20 IST

ಸಾಂದರ್ಭಿಕ ಚಿತ್ರ

ಮಂಗಳೂರು, ಜೂ.29: ನಗರಕ್ಕೆ ವ್ಯಾಸಂಗ ಮಾಡಲು ಬರುತ್ತಿದ್ದ ಬಂಟ್ವಾಳದ ವಿದ್ಯಾರ್ಥಿನಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಡಬ ಮೂಲದ ಅನೀಶ್ ರೆಹಮಾನ್ (29) ಪ್ರಕರಣ ಆರೋಪಿಯಾಗಿದ್ದು, ಆರೋಪಿ ವಿವಾಹಿತ ಎಂದು ಹೇಳಲಾಗಿದೆ.

ಆರೋಪಿಗೆ  24ವರ್ಷದ ವಿದ್ಯಾರ್ಥಿನಿ ಇನ್‍ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ನಗರದ ನಾನಾ ಕಡೆ ಸುತ್ತಾಡಿದ್ದಲ್ಲದೆ, ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವುದಾಗಿ ದೂರು ದಾಖಲಾಗಿದೆ.

ಆರೋಪಿಗೆ ವಿವಾಹವಾಗಿರುವ ವಿಚಾರ ತಿಳಿದು ಆಕೆ ಮನೆಯವರಲ್ಲಿ ಈ ವಿಚಾರ ತಿಳಿಸಿದ ಹಿನ್ನೆಲೆಯಲ್ಲಿ ಮನೆಯವರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News