×
Ad

ಮಂಗಳೂರು: ಲಂಚ ಸ್ವೀಕಾರ; ಶಾಲಾ ಸಂಚಾಲಕಿ ಬಂಧನ

Update: 2023-07-07 21:00 IST

ಜ್ಯೋತಿ ಪೂಜಾರಿ

ಮಂಗಳೂರು, ಜು.7: ನಿವೃತ್ತಿಯಾಗುತ್ತಿರುವ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಶಾಲಾ ಸಂಚಾಲಕಿಯೊಬ್ಬರು ಲಂಚಕ್ಕೆ ಬೇಡಿಕೆಯಿಟ್ಟು 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ.

ಮಂಗಳೂರು ಹೊರವಲಯದ ಬಜ್ಪೆಯ ಶ್ರೀ ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್ ಹಾಗೂ ಕಲಾವತಿ, ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಲೋಕಾಯುಕ್ತ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News