×
Ad

ಮಂಗಳೂರು: ಮಾದಕ ವಸ್ತು ಸಹಿತ ಆರೋಪಿಗಳ ಬಂಧನ

Update: 2023-07-12 21:11 IST

ಮಂಗಳೂರು, ಜು.12: ನಗರ ಹೊರವಲಯದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆಯ ಬಳಿ ಮಾದಕ ವಸ್ತು ‘ಎಂಡಿಎಂಎ’ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಆರೋಪಿಗಳನ್ನು ಪಿಲಿಕುಳ ಸಮೀಪದ ನಿವಾಸಿ ಶಾರೂಕ್ (27) ಮತ್ತು ತೋಕೂರಿನ ಜಗದೀಶ್ (45) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕ ಆಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಲಾಗಿದೆ. ಇದರ ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ‘ಎಂಡಿಎಂಎ’ಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಾವೂರು ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಪರಿಶೀಲಿಸಿದಾಗ ಕಾರಿನಲ್ಲಿ ಮಾರಕ ಆಯುಧಗಳು ಕೂಡ ಕಂಡು ಬಂದಿವೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News