×
Ad

ಮಂಗಳೂರು: ಸಿ.ಎಂ.‌ಮುಸ್ತಫಾ ನಿಧನ

Update: 2023-07-13 08:19 IST

ಮಂಗಳೂರು: ನಗರದ ಬಂದರು ಅನ್ಸಾರಿ ರಸ್ತೆಯ ನಿವಾಸಿ, ಸಿಎಂ ಮುಸ್ತಫಾ (62) ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಹೃದಯ ಸಂಬಂಧಿ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ದಿ ಮುಸ್ಲಿಂ ಸೆಂಟ್ರಲ್ ಕಮಿಟಿ, ಮುಸ್ಲಿಂ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಯಾಗಿದ್ದ ಅವರು ಮಂಗಳೂರು ‌ಧಕ್ಕೆ ಮೀನು ಮಾರಾಟ ‌ಮತ್ತು ಕಮಿಷನ್ ಏಜೆಂಟ್ ಸಂಘದ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದರು.‌ ಮೃತರ ನಿಧನಕ್ಕೆ ಮಾಜಿ ಮೇಯರ್, ದ.ಕ.ಜಿಲ್ಲಾ ಮುಸ್ಲಿಂ ‌ಒಕ್ಕೂಟದ ಅಧ್ಯಕ್ಷ ‌ಕೆ.‌ಅಶ್ರಫ್ ಸಂತಾಪ‌ ವ್ಯಕ್ತಪಡಿಸಿದ್ದಾರೆ.

ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರು,ಒಬ್ಬ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News