×
Ad

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಸೆರೆ

Update: 2023-06-16 21:12 IST

ಉಳ್ಳಾಲ: ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಬಗಂಬಿಲ ನಿವಾಸಿ ಅಕ್ಷತ್ ಕುಮಾರ್ (34) ಎಂದು ಗುರುತಿಸಲಾಗಿದೆ

ಈತ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ ಶೆಡ್ ನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿ ಅಕ್ಷತ್ ಕುಮಾರ್ ನನ್ನು ಬಂಧಿಸಿ, ಒಟ್ಟು 72 ಗ್ರಾಂ ತೂಕದ 3,66,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, 20,880 ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News