×
Ad

ಕೈಮಗ್ಗ ತರಬೇತಿಯ ಮಹಿಳೆಯರೊಂದಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂವಾದ

Update: 2023-07-09 18:31 IST

ಉಡುಪಿ: ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್‌ನ ಸಂಪನ್ಮೂಲ ಕೇಂದ್ರದಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಕೈ ಮಗ್ಗ ತರಬೇತಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಹಾಗೂ ಉಡುಪಿ ಜಿಲ್ಲಾ ಉಸ್ತು ವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶನಿವಾರ ಭೇಟಿ ನೀಡಿ, ಮಹಿಳೆಯ ರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರು ತರಬೇತಿ ಕೇಂದ್ರದ ಆವರಣದಲ್ಲಿ ಗಿಡ ನೆಟ್ಟರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಎಚ್., ಎಸ್ಪಿ ಅಕ್ಷಯ್ ಎಂ.ಹಾಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನವಾಗಿ ಆರಂಭಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿ.ಪಂ. ಸಿಇಓ ಪ್ರಸನ್ನ ಎಚ್., ಎಸ್ಪಿ ಅಕ್ಷಯ್ ಎಂ. ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಕುಂದಾಪುರ ಉಪ ವಿಭಾಗಾಧಿ ಕಾರಿ ರಶ್ಮಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News