×
Ad

ಸುಳ್ಯ: ಬಾಲಕಿಯ ಅತ್ಯಾಚಾರ ಆರೋಪ; ಯುವಕನ ಬಂಧನ

Update: 2023-07-10 18:17 IST

ಸಾಂದರ್ಭಿಕ ಚಿತ್ರ

ಸುಳ್ಯ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪದಡಿ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ನಡೆದಿದೆ.

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಬಂಧಿತ ಆರೋಪಿ. ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಜು.7 ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದ್ದು ಸ್ಕ್ಯಾನಿಂಗ್ ನಲ್ಲಿ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್ ಎಂಬಾತ ದೈಹಿಕ ಸಂಪರ್ಕ ಎಸಗಿರುವುದನ್ನು ಮನೆಯವರಲ್ಲಿ ತಿಳಿಸಿದ್ದು ಈ ಬಗ್ಗೆ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಯಲ್ಲಿ ಕಾರ್ತಿಕ್ ವಿರುದ್ದ ದೂರು ನೀಡಿದ್ದರು.

ಪೊಲೀಸರು ಯುವಕನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News