ನಂದಾವರ ದುರಂತ: ಶಾಸಕ ರಾಜೇಶ್ ನಾಯ್ಕ್ ಆಸ್ಪತ್ರೆಗೆ ಭೇಟಿ; ಚಿಕಿತ್ಸಾ ವೆಚ್ಚ ಭರಿಸುವ ಭರವಸೆ
Update: 2023-07-08 19:39 IST
ಬಂಟ್ವಾಳ : ನಂದಾವರದಲ್ಲಿ ಮನೆಯೊಂದಕ್ಕೆ ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಘಟನೆ ನಡೆದ ಸಂದರ್ಭ ಶಾಸಕರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದ ಕಾರಣ ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನೆಯಲ್ಲಿ ಸಫಾಳ ತಾಯಿ ಮೃತಪಟ್ಟಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಅವರು ಕುಟುಂಬಕ್ಕೆ ಭರವಸೆ ನೀಡಿದರು.