×
Ad

ಆ.18ರೊಳಗೆ ಪ್ರವೀಣ್ ನೆಟ್ಟಾರು ಹತ್ಯಾ ಆರೋಪಿಗಳಿಗೆ ಶರಣಾಗಲು ಎನ್‌ಐಎ ನೋಟಿಸ್

Update: 2023-07-15 22:02 IST

ಮಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ಆ.18ರೊಳಗೆ ಶರಣಾಗುವಂತೆ ಎರಡನೇ ಬಾರಿ ನೋಟಿಸ್ ನೀಡಿದೆ.

ಎನ್‌ಐಎ ಕೋರ್ಟ್ ಆದೇಶದಂತೆ ಎನ್‌ಐಎ ಅಧಿಕಾರಿಗಳು ದ.ಕ.ಜಿಲ್ಲೆಯ ಪುತ್ತೂರು ಹಾಗೂ ಸುಳ್ಯ ವ್ಯಾಪ್ತಿಯಲ್ಲಿ ಎಚ್ಚರಿಕೆ ನೋಟಿಸ್ ಅಂಟಿಸಿದ್ದಾರೆ, ಅಲ್ಲದೆ ಧ್ವನಿ ವರ್ಧಕ ಮೂಲಕವೂ ಎಚ್ಚರಿಕೆ ನೀಡಿದ್ದಾರೆ.

ಜೂನ್‌ನಲ್ಲಿ ಮೊದಲ ಬಾರಿಗೆ ಎನ್‌ಐಎ ಅಧಿಕಾರಿಗಳು ಇದೇ ರೀತಿ ಎಚ್ಚರಿಕೆ ನೀಡಿದ್ದರು. ಜೂ.30ರಂದು ಶರಣಾಗುವಂತೆ ಗಡು ವಿಧಿಸಿದ್ದರು. ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಎಚ್ಚರಿಕೆ ನೀಡಿರುವ ಎನ್‌ಐಎ ತಂಡ, ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಿಸಿದೆ.

ಈಗಾಗಲೇ ತಲೆಮರೆಸಿಕೊಂಡಿರುವ ಆರೋಪಿಗಳ ಮನೆಗೆ ಎನ್‌ಐಎ ತಂಡ ಕೋರ್ಟ್ ಆದೇಶದ ಪ್ರತಿ ಅಂಟಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News