×
Ad

ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ: ಆದೇಶ

Update: 2023-06-16 22:47 IST

ಮಂಗಳೂರು, ಜೂ.16: ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.

ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡು ವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News