×
Ad

ಮಂಗಳೂರು : ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕ ಮೃತ್ಯು

Update: 2023-07-03 18:11 IST

ಮಂಗಳೂರು: ನಗರದ ಉರ್ವಸ್ಟೋರ್ ಬಳಿ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.

ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಡಗೂರಿನ ಪ್ರಸ್ತುತ ಉರ್ವ ಅಶೋಕನಗರ ನಿವಾಸಿ ಶ್ರೀಧರ್ ಬಿ. (29) ಮೃತಪಟ್ಟವರು.

ನಗರದ ಖಾಸಗಿ ಸಂಸ್ಥೆಯೊಂದರಲ್ಲಿ ಹಿರಿಯ ಸಂಪರ್ಕಧಿಕಾರಿಯಾಗಿದ್ದ ಶ್ರೀಧರ್ ಅಶೋಕನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರವಿವಾರ ಬಾಡಿಗೆ ಮನೆಯೊಂದನ್ನು ನೋಡಲು ತನ್ನ ಗೆಳೆಯನ ಜತೆ ರಿಕ್ಷಾದಲ್ಲಿ ತೆರಳಿದ್ದರು. ಈ ವೇಳೆ ಉರ್ವಸ್ಟೋರ್ ಬಳಿ ಪಾದಚಾರಿಯೊಬ್ಬರು ಏಕಾಏಕಿ ರಸ್ತೆ ದಾಟಿದ್ದಾರೆ. ಹಾಗಾಗಿ ರಿಕ್ಷಾವು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿವೆ. ಇದರಿಂದ ಶ್ರೀಧರ್ ರಸ್ತೆಗೆ ಎಸೆಯಲ್ಪಟ್ಟಿದ್ದು ಅವರ ಮೇಲೆ ರಿಕ್ಷಾ ಬಿದ್ದಿದೆ. ಗಂಭೀರ ಗಾಯಗೊಂಡ ಶ್ರೀಧರ್‌ರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ದಾರಿಮಧ್ಯೆ ಮೃತಪಟ್ಟಿದ್ದಾರೆ.

ಈ ಘಟನೆಯಲ್ಲಿ ರಿಕ್ಷಾ ಚಾಲಕ ಹಾಗೂ ಇನ್ನೊಬ್ಬ ಪ್ರಯಾಣಿಕ ಅಪಾಯದಿಂದ ಪಾರಾಗಿದ್ದಾರೆ. ಮೃತ ಶ್ರೀಧರ್‌ಗೆ ಒಂದು ವರ್ಷದ ಹಿಂದೆ ಮದುವೆಯಾಗಿತ್ತು ಎಂದು ತಿಳಿದು ಬಂದಿದೆ.

ಸೋಮವಾರ ಬೆಳಗ್ಗೆ ಕುಟುಂಬಿಕರ ಸಮ್ಮುಖ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News