×
Ad

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸ್ ದಾಳಿ: ಆರೋಪಿ ಬಂಧನ

Update: 2023-07-08 19:31 IST

ಭಟ್ಕಳ: ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟವಾಣಿ ಗ್ರಾಮದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಸಂತ್ರಸ್ತೆ ಯುವತಿಯನ್ನು ರಕ್ಷಿಸಿದ್ದು ಮಹಿಳಾ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಹಿಳೆಯನ್ನು ಕುಂಟವಾಣಿ ಗುಡಿಹಿತ್ತಲ್ ನಿವಾಸಿ ರಾಧಾ ಶೆಟ್ಟಿ(45) ಎಂದು ಗುರುತಿಲಾಗಿದೆ. ಸಂತ್ರಸ್ತೆ ಬೆಂಗಳೂರು ಮೂಲದ 28 ವರ್ಷದ ಯುವತಿಯನ್ನು ಪೊಲೀಸರು ರಕ್ಷಿಸಿದ್ದು ಕಾರವಾರದ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಖಚಿತ ಮಾಹಿತಿ ಪಡೆದ ಪೊಲೀಸರು ಭಟ್ಕಳ ಡಿ.ವೈ.ಎಸ್.ಪಿ ಶ್ರೀಕಾಂತ ಕೆ, ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಾಳಿಯಲ್ಲಿ 3 ಮೊಬೈಲ್, ನಗದು ಹಣ ವಶಪಡಿಸಿಕೊಳ್ಳಲಾಗಿದೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಠಾಣೆ ಪಿ.ಎಸ್.ಐ ಮಯೂರ ಪಟ್ಟಣಶೆಟ್ಟಿ ಪ್ರಕರಣವನ್ನು ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News