×
Ad

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ; ಓರ್ವ ಸೆರೆ

Update: 2023-06-23 23:09 IST

ಮಂಗಳೂರು, ಜೂ.23: ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರದ ಬಳಿ ಇರುವ ಲಾಡ್ಜೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರು ಮಹಿಳೆಯರನ್ನು ಪಾರು ಮಾಡಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಮಂಡ್ಯದ ಮಗ್ಗನ್‌ ಕೊಪ್ಪಲ್ ನಿವಾಸಿ ಲಕ್ಕಪ್ಪ(25) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷ್ಣ ಎಂಬಾತನು ಫ್ಲ್ಯಾಟ್ ಬಾಡಿಗೆಗೆ ಪಡೆದು ಇದರಲ್ಲಿ ಲಕ್ಕಪ್ಪನ ಜೊತೆ ಸೇರಿಕೊಂಡು ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ.

ಲಕ್ಕಪ್ಪನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಕೃಷ್ಣ ಹಾಗೂ ಇತರರ ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News